ಬಜೆಟ್‌ಗೆ ಕ್ಷಣಗಣನೆ, ಚೊಚ್ಚಲ ಆಯವ್ಯಯ ಮಂಡಿಸಲಿರುವ ಬೊಮ್ಮಾಯಿ ಕಾರ್ಯಕ್ರಮಗಳ ವಿವರ ಇಲ್ಲಿದೆ

ಮಧ್ಯಾಹ್ಮ 12.30ಕ್ಕೆ ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದು, ಬಜೆಟ್ ಮಂಡನೆ ಬಳಿಕ ವಿಧಾನಪರಿಷತ್ ಕಾರ್ಯಕಲಾಪದಲ್ಲೂ ಸಿಎಂ ಭಾಗಿಯಾಗಲಿದ್ದಾರೆ. ಇದಾದ ಬಳಿಕ ಸಂಜೆ 4 ಗಂಟೆಗೆ ಪತ್ರಿಕಾಗೋಷ್ಠಿಯನ್ನು ನಡೆಸಲಿದ್ದಾರೆ.

ಬೆಂಗಳೂರು: ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗಿದು ಚೊಚ್ಚಲ ಬಜೆಟ್ ಆಗಿದ್ದು ಸಹಜವಾಗಿ ಆಕರ್ಷಕ ಘೋಷಣೆಗಳು ಈ ಬಾರಿಯ ಬಜೆಟ್‌ನಲ್ಲಿ ಇರಬಹುದೇ ಎಂಬ ನಿರೀಕ್ಷೆಗಳು ಇವೆ.

ಮಧ್ಯಾಹ್ಮ 12.30 ಕ್ಕೆ ಬಜೆಟ್ ಮಂಡನೆ

ಮಧ್ಯಾಹ್ಮ 12.30ಕ್ಕೆ ರಾಜ್ಯ ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡನೆ ಮಾಡಲಿದ್ದಾರೆ. ಅದಕ್ಕೂ ಮುನ್ನ 12.10ಕ್ಕೆ ಸಚಿವ ಸಂಪುಟ ಸಭಾ ಮಂದಿರದಲ್ಲಿ ಆಯವ್ಯಯವನ್ನು ಅನುಮೋದಿಸಲು ಸಚಿವ ಸಂಪುಟದ ವಿಶೇಷ ಸಭೆ ನಡೆಯಲಿದೆ. ಇನ್ನು ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬೆಳಗ್ಗೆ ಸಿಎಂ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಲಿದ್ದಾರೆ. ಬಳಿಕ ತಮ್ಮ ರೇಸ್ ಕೋರ್ಸ್ ನಿವಾಸಕ್ಕೆ ತೆರಳಲಿದ್ದಾರೆ. ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ಆಗಮಿಸಲಿದ್ದಾರೆ.

Leave a Reply

Your email address will not be published. Required fields are marked *